Shutter Speed ಅಲ್ಲದೇ ಛಾಯಾಗ್ರಹಣದಲ್ಲಿ ಬೆಳಕನ್ನು ನಿಯಂತ್ರಿಸಲು ಸಹಾಯಕವಾಗುವ ಇನ್ನೊಂದು ಅಂಶ "Aperture" ಅಥವಾ ಬೆಳಕಿಂಡಿ. ಚಿತ್ರ ತೆಗೆಯುವಾಗ ಲೆನ್ಸನ ತೆರವು ಎಷ್ಟು ದೊಡ್ಡದಿರುತ್ತ ದೋ ಅದೇ ಬೆಳಕಿಂಡಿ. ಈ ತೆರವು ದೊಡ್ಡದಾದಷ್ಟೂ ಕ್ಯಾಮರಾದ ಸೆನ್ಸರ್ಗೆ ತಲುಪುವ ಬೆಳಕಿನ ಪ್ರಮಾಣ ಅಧಿಕವಾಗಿರುತ್ತದೆ. ಬೆಳಕಿಂಡಿಯನ್ನು ಛಾಯಾಗ್ರಹಣದಲ್ಲಿ f/2.8, f/4, f/5.2, f/8 ಎಂದು 'f-stops'ಎಂಬ ಮಾನ ದಂಡದಿಂದ ಅಳೆಯುತ್ತಾರೆ. ಇಲ್ಲಿ 'f-stops'ನ ಬೆಲೆ ಜಾಸ್ತಿಯಾದಂತೆ ಬೆಳಕಿಂಡಿಯ ಗಾತ್ರ ಕಿರಿದಾಗುತ್ತದೆ ಮತ್ತು ಸೆನ್ಸರ್ಗೆ ತಲುಪುವ ಬೆಳಕಿನ ಪ್ರಮಾಣ ಕಡಿಮೆಯಾಗುತ್ತದೆ. ಉದಾಹರಣೆಗೆ f/8 ಗಿಂತ f/2.8ನ ಬೆಳಕಿಂಡಿ ದೊಡ್ಡದು.
ಆದರೆ ಈ ಬೆಳಕಿಂಡಿ ಕೇವಲ ಬೆಳಕನ್ನು ನಿಯಂತ್ರಿಸುವುದೂ ಅಲ್ಲದೇ "Depth of Field"ನ ಮೇಲೂ ತನ್ನ ಪರಿಣಾಮ ಬೀರುತ್ತದೆ. ಪಕ್ಕದ ಚಿತ್ರದಲ್ಲಿ ಮರದೆಲೆಯ ಚಿಗುರು ಸ್ಪುಟವಾಗಿ ಕಾಣಿಸಿ ಹಿಂದಿನ ಗುಡ್ಡವು ಅಸ್ಪಷ್ಟವಾಗಿದೆ. ಅಂದರೆ ಈ ಚಿತ್ರದಲ್ಲಿ "Depth of Field"ಕಡಿಮೆಯಿದೆ. ಇಲ್ಲಿ ಚಿಗುರು ನನ್ನ ಪ್ರಧಾನ ವಿಷಯವಾಗಿದ್ದು, ಚಿತ್ರ ನೋಡುವವರ ಗಮನ ಹಿನ್ನೆಲೆಗೆ ಸರಿಯುವುದನ್ನು ತಡೆಯಲು ಅದನ್ನು ಅಸ್ಪಷ್ಟವಾಗಿಸಲು ನಾನು ಬಳಸಿದ ಬೆಳಕಿಂಡಿ f/3.5. ಅಂದರೆ ಬೆಳಕಿಂಡಿ ಹೆಚ್ಚಾದಂತೆಲ್ಲಾ "Depth of Field" ಕಡಿಮೆಯಾಗುತ್ತದೆ. ಇದೇ ಚಿತ್ರವನ್ನು f/8 ನಿಂದ ತೆಗೆದಿದ್ದರೆ "Depth of Field" ಜಾಸ್ತಿಯಾಗಿ ಗುಡ್ಡವೂ ಸ್ಪಷ್ಟವಾಗಿ ಕಾಣಿಸುತ್ತಿತ್ತು.
ಈ ಮೇಲಿನ ಎರಡು ಚಿತ್ರಗಳಲ್ಲಿ ಮಿಡತೆ ನನ್ನ ವಿಷಯ. ಆದರೆ ಸೂಕ್ಷವಾಗಿ ಗಮನಿಸಿದಾಗ ಇವೆರಡರ ನಡುವಿನ "Depth of Field" ವ್ಯತ್ಯಾಸ ತಿಳಿಯುತ್ತದೆ. ಮೊದಲ ಚಿತ್ರದಲ್ಲಿ ಕಣ್ಣು, ಮುಖ ಮಾತ್ರ ಸ್ಪುಟವಾಗಿದ್ದರೆ, ಎರಡನೆಯದರಲ್ಲಿ ಕಣ್ಣು, ಕಾಲು, ರೆಕ್ಕೆ ಎಲ್ಲವೂ ಸ್ಪುಟವಾಗಿದೆ. ಮೊದಲ ಚಿತ್ರಕ್ಕೆ f/3.5 ಹಾಗೂ ಎರಡನೆಯದ್ದಕ್ಕೆ f/8 ಬಳಸಿದ್ದರಿಂದ ಈ ವ್ಯತ್ಯಾಸ.
ಸಾಮಾನ್ಯವಾಗಿ "landscape"ನಲ್ಲಿ
ಮುನ್ನೆಲೆ, ನಡುನೆಲೆ('middle ground'ಗೆ ಪರ್ಯಾಯವಾಗಿ), ಹಿನ್ನೆಲೆ ಎಲ್ಲವೂ ಸ್ಪುಟವಾಗಿರಬೇಕಾದ್ದರಿಂದ ಕಡಿಮೆ ಬೆಳಕಿಂಡಿಯನ್ನು ಉಪಯೋಗಿಸಬಹುದು. ಕೆಳಕಿನ ಚಿತ್ರದಲ್ಲಿ ಮುನ್ನೆಲೆಯ ಮಂಟಪ, ನಡುನೆಲೆಯ ಹುಲು ಮಾನವರು, ಹಿನ್ನೆಲೆಯ ಬೆಟ್ಟ ಎಲ್ಲವೂ ಸ್ಪುಟವಾಗಿ ಕಾಣಿಸಲು f/8 ಬಳಸಿದ್ದೇನೆ.
portrait ಮತ್ತು Macro ದಲ್ಲಿ ಕೇವಲ ವಿಷಯಕ್ಕೆ ಮಹತ್ವ ಕೊಡುವುದರಿಂದ ಹೆಚ್ಚಿನ ಬೆಳಕಿಂಡಿಯನ್ನು ಉಪಯೋಗಿಸಿ ಉಳಿದದ್ದನ್ನು ಅಸ್ಪಷ್ಟವಾಗಿಸಬಹುದು. ಈ ಕೆಳಗಿನ ಚಿತ್ರದಲ್ಲಿ ಹಿನ್ನೆಲೆಯನ್ನು ಅಸ್ಪಷ್ಟವಾಗಿಸಲು ನಾನು ಬಳಸಿದ ಬೆಳಕಿಂಡಿ f/3.5
ಉಪಯುಕ್ತ ಮಾಹಿತಿ,
ReplyDeleteಹಂಚಿಕೊಂಡಿದ್ದಕ್ಕೆ ನನ್ನಿ...
ನಾಲ್ಕನೆಯ ಚಿತ್ರದಲ್ಲಿ ಎಡಗಡೇಯಲ್ಲಿರುವವರು ನೀವೇ ತಾನೆ?
ReplyDeleteಪಾಲಚಂದ್ರ ಸಾರ್, ಫೋಟೋಗ್ರಫಿಯಲ್ಲಿ ಕನ್ನಡದಲ್ಲಿ ಅವುಗಳ ತಾಂತ್ರಿಕ ಪದಗಳ್ಳನ್ನು ಅನುವಾದ ಮಾಡಿ ಹೇಳುವುದು ಸುಲಭದ ಕೆಲಸವಲ್ಲ. ಅದನ್ನು ನೀವು ಚೆನ್ನಾಗಿ ಮಾಡುತ್ತಿದ್ದೀರಿ. ಫೋಟೋ ಸಮೇತ ಮಾಹಿತಿ ನೀಡುತ್ತಿದ್ದೀರಿ. good ಕನ್ನಡದಲ್ಲಿ ಇದು ಬೇಕಿತ್ತು. ಮುಂದುವರಿಸಿ.......
ReplyDeleteಅನಿಲ್,
ReplyDeleteಧನ್ಯವಾದ, ಅಂದಹಾಗೆ ಆ ಹುಲುಮಾನವ ನಾನೇ..
ಶಿವು,
ನಿಮ್ಮ ಪ್ರೋತ್ಸಾಹಕ್ಕೆ ನನ್ನ ವಂದನೆಗಳು.. ಒಂದು ವೇಳೆ ತಪ್ಪಿದ್ದಲ್ಲಿ ಅಥವಾ ಹೆಚ್ಚಿನ ವಿಷಯ ಬರೆಯಬೇಕಾಗಿದ್ದಲ್ಲಿ ದಯವಿಟ್ಟು ನಿಮ್ಮ ಅನುಭವ ಹಂಚಿಕೊಳ್ಳಿ
--
ಪಾಲ
ನಾನು ಅಪರ್ಚರ್ ಬಗ್ಗೆ ಕೇಳಿದ್ದೆನೆ ಹೊರತು ಅರ್ಥ ಮಾಡಿಕೊಂಡಿರಲಿಲ್ಲ. ನೀವು ಅದನ್ನು ಉದಾಹರಣೆಗಳ ಸಮೇತ ವಿವರಿಸಿ ಅರ್ಥವಾಗುವಂತೆ ಬರೆದಿದ್ದೀರಿ. ಧನ್ಯವಾದಗಳು.
ReplyDeleteಹರೀಶ್,
ReplyDeleteಅನಿಸಿಕೆಗೆ ವಂದನೆಗಳು.
--
ಪಾಲ